ಏ.24ರಿಂದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಎನ್.ವಿ.ರಮಣ ನೇಮಕಕ್ಕೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಭಾರತದ ಸುಪ್ರೀಂಕೋರ್ಟಿನ‌ ಮುಖ್ಯನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಅವರ ಹೆಸರನ್ನು ಶಿಫಾರಸ್ಸು ಮಾಡಿರುವುದಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.
ಇದೇ ಏಪ್ರಿಲ್ 23ರಂದು ಸುಪ್ರೀಂಕೋರ್ಟಿನ ಮುಖ್ಯನ್ಯಾಯಮೂರ್ತಿಯಾಗಿರುವ ಎಸ್.ಎ.ಬೊಬ್ಡೆ ಅವರು ನಿವೃತ್ತರಾಗಲಿದ್ದಾರೆ. ಆದ್ದರಿಂದ ತಮ್ಮ ಉತ್ತರಾಧಿಕಾರಿಯನ್ನಾಗಿ ಹಾಲಿ ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿರುವ ಎನ್.ವಿ.ರಮಣ ಅವರನ್ನು ಎಸ್.ಎ.ಬೊಬ್ಡೆ ಅವರು ಶಿಫಾರಸ್ಸು ಮಾಡಿದ್ದಾರೆ.
ರಾಷ್ಟ್ರಪತಿ ರಮಾನಾಥ್ ಕೋವದ್ ಈ ಶಿಫಾರಸ್ಸಿಗೆ ಅಂಕಿತ ಹಾಕಿರುವುದರಿಂದ ಇದೇ ಏಪ್ರಿಲ್ 24 ರಂದು ಭಾರತದ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮುಂದಿನ 2022ನೇ ಏಪ್ರಿಲ್ 26ರವರೆಗೆ ಸುಪ್ರೀಂಕೋರ್ಟಿನ ಮುಖ್ಯನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಅವರು ಕಾರ್ಯನಿರ್ವಹಿಸಿ ಆನಂತರ ಸೇವೆಯಿಂದ ನಿವೃತ್ತರಾಗಲಿದ್ದಾರೆ.
63 ವರ್ಷದ ಎನ್.ವಿ.ರಮಣರವರು ಆಂಧ್ರಪ್ರದೇಶದ ಪೊನ್ನಾವರಂ ಗ್ರಾಮದಲ್ಲಿ 1957ನೇ ಆಗಸ್ಟ್ 27 ರಂದು ಜನಿಸಿದ್ದರು. ಆಂಧ್ರಪ್ರದೇಶದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಾಗಿದ್ದ ಎನ್.ವಿ.ರಮಣ ಅವರು ಬಳಿಕ 2014ರಲ್ಲಿ ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.
KTVKANNADA
ನವದೆಹಲಿ

Add Comment