ಬೆಂಗಳೂರು ದಕ್ಷಿಣ ಕ್ಷೇತ್ರದ ಮಂಟಪ ಗ್ರಾ.ಪಂ ಸದಸ್ಯ ಚೆಲುವರಾಜ್ ಚಿತ್ತ ಅಭಿವೃದ್ಧಿಯತ್ತ

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಂಟಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಂಟಪ ಗ್ರಾಮದ ಸದಸ್ಯರಾಗಿ ಆಯ್ಕೆಯಾಗಿರುವ ಚೆಲುವರಾಜ್ ಅವರು ಕೆಟಿವಿ ನ್ಯೂಸ್ ಚಾನೆಲ್ ನೊಂದಿಗೆ ಮಾತನಾಡಿದರು.
“ನಾನು ಈಗಾಗಲೇ ಗ್ರಾಮ ಪಂಚಾಯಿತಿ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಹೇಗೆ ಕಾರ್ಯನಿರ್ವಹಿಸಬೇಕೆಂಬ ಬಗ್ಗೆ ತರಬೇತಿ ಶಿಬಿರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಈಗ ಮಂಟಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಸ,ಚರಂಡಿ ಕಾಮಗಾರಿಗಳು, ಕುಡಿಯುವ ನೀರಿನ ಸೌಲಭ್ಯ ನೀಡಲು ಹೆಚ್ಚಿನ ಒತ್ತು ನೀಡಲಾಗುತ್ತದೆ. ಜೊತೆಗೆ ನಮ್ಮ ವ್ಯಾಪ್ತಿಯಲ್ಲಿ ರಸ್ತೆಗಳನ್ನು ರಿಪೇರಿ ಮಾಡಿ ಡಾಂಬರುಯುಕ್ತ ರಸ್ತೆಗಳನ್ನಾಗಿ ನಿರ್ಮಿಸಲು ಶಾಸಕರ ಅನುದಾನ, ಗ್ರಾಮ ಪಂಚಾಯಿತಿ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ‌
ಇದೇ ವೇಳೆ ತಮ್ಮನ್ನು ಗ್ರಾಮ ಪಂಚಾಯಿತಿ ಸದಸ್ಯರನ್ನಾಗಿ ಚುನಾವಣೆಯಲ್ಲಿ ಮತ ನೀಡಿ ಗೆಲ್ಲಿಸಿದ ಎಲ್ಲಾ ಮತದಾರ ಬಂಧುಗಳಿಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ನೂತನ ಮಂಟಪ ಗ್ರಾಮ ಪಂಚಾಯಿತಿ ಸದಸ್ಯ ಚೆಲುವರಾಜ್ ಹೇಳಿದರು.
ಬಿ.ಸೌಮ್ಯ
KTVKANNADA
ಮಂಟಪ

Add Comment