ಮಸ್ಕಿ ಉಪಚುನಾವಣೆ: ಪ್ರತಾಪಗೌಡ ಪಾಟೀಲ್ ಪರ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ತಂಡದ ಬಿರುಸಿನ ಪ್ರಚಾರ

ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕಾಗಿ ಇಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರ ಪರವಾಗಿ ಹಲವಾರು ಬಿಜೆಪಿ ನಾಯಕರ ಜೊತೆ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಸಂಸದ ಸಂಗಣ್ಣ ಕರಡಿ, ಸಚಿವ ಬೈರತಿ ಬಸವರಾಜ್, ಸುರಪುರ ಶಾಸಕ ರಾಜುಗೌಡ, ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಮಸ್ಕಿ ಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡ ಪಾಟೀಲ್ ಪರ ಚುನಾವಣಾ ಪ್ರಚಾರ ಕೈಗೊಂಡು ಮತಯಾಚಿಸಿದರು.
KTVKANNADA
ಮಸ್ಕಿ

Add Comment