ಫಿಟ್ನೆಸ್ ಸಾಬೀತಿಗೆ ರಣಜಿ ಪಂದ್ಯ ಆಡಲಿರುವ ರವೀಂದ್ರ ಜಡೇಜಾ

0

ವದೆಹಲಿ: ಭಾರತದ ತಾರಾ ಆಲ್ರೌಂಡರ್‌ ರವೀಂದ್ರ ಜಡೇಜಾ ಆಸ್ಪ್ರೇಲಿಯಾ ವಿರುದ್ಧದ ಮಹತ್ವದ ಟೆಸ್ಟ್‌ ಸರಣಿಗೂ ಮುನ್ನ ಫಿಟ್ನೆಸ್‌ ಸಾಬೀತು ಪಡಿಸಲು ರಣಜಿ ಟ್ರೋಫಿ ಪಂದ್ಯದಲ್ಲಿ ಆಡಲಿದ್ದಾರೆ. ಜನವರಿ 24ರಿಂದ ಚೆನ್ನೈನಲ್ಲಿ ತಮಿಳುನಾಡು ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಡೇಜಾ ಸೌರಾಷ್ಟ್ರ ಪರ ಕಣಕ್ಕಿಳಿಯಲಿದ್ದಾರೆ.

 

ಆಸೀಸ್‌ ವಿರುದ್ಧ ಮೊದಲೆರಡು ಟೆಸ್ಟ್‌ಗೆ ಜಡೇಜಾ ಆಯ್ಕೆಯಾಗಿದ್ದಾರಾದರೂ ಫಿಟ್ನೆಸ್‌ ಸಾಬೀತು ಪಡಿಸಬೇಕು ಎಂದು ಬಿಸಿಸಿಐ ಷರತ್ತು ವಿಧಿಸಿದೆ. ಕಳೆದ ವರ್ಷ ಆಗಸ್ಟ್ 31ರಂದು ಹಾಂಕಾಂಗ್‌ ವಿರುದ್ಧದ ಏಷ್ಯಾಕಪ್‌ ಪಂದ್ಯದ ಬಳಿಕ ಜಡೇಜಾ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ಅವರು ಬಲಮಂಡಿಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

About Author

Leave a Reply

Your email address will not be published. Required fields are marked *

You may have missed