ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.71.8 ರಷ್ಟು ಫಲಿತಾಂಶ

ಈ ಬಾರಿಯ ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 71.8 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿಯ ಒಟ್ಟು 5,82.316 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಪೈಕಿ ಸರ್ಕಾರಿ ಶಾಲೆಗಳ ಶೇಕಡಾ 72.79 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಮಾನ್ಯತೆ ಹೊಂದಿದ ಶಾಲೆಗಳ  ಶೇಕಡಾ 71.6 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಮಾನ್ಯತೆ ಹೊಂದಿರದ ಶಾಲೆಗಳ ಶೇಕಡಾ 82.31 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿಯ ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 66.41 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಆದರೆ ಇದನ್ನೂ ಮೀರಿಸುವಂತೆ ಶೇಕಡಾ 77.74 ರಷ್ಟು ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ.  ಈ ಬಾರಿ 6 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಗಳಿಸಿ ಮೊದಲ ರಾಂಕ್ ಗಳಿಸಿದ್ದಾರೆ. ಅಲ್ಲದೆ 11 ವಿದ್ಯಾರ್ಥಿಗಳು 625 ಕ್ಕೆ 624 ಅಂಕಗಳನ್ನು ಗಳಿಸಿದ್ದಾರೆ.

ಕೆ ಟಿವಿ ನ್ಯೂಸ್ ಬೆಂಗಳೂರು

Add Comment