ಕೊರೋನಾ ಸೋಂಕಿತ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

ಕೊರೋನಾ ಸೋಂಕಿತರಾಗಿರುವ ದಕ್ಷಿಣ ಭಾರತದ ಅಗ್ರಮಾನ್ಯ ಗಾಯಕ,ನಟ ಎಸ್.ಪಿ.ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಎಸ್.ಪಿ.ಬಾಲಸುಬ್ರಮಣ್ಯಂ ಅವರು ಕಳೆದ ಆಗಸ್ಟ್ 5 ರಂದು ಕೊರೋನಾ ಸೋಂಕು ತಗುಲಿದ್ದರಿಂದ ಚೆನ್ನೈ ಮಹಾನಗರದ ಎಂ.ಜಿ.ಎಂ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆರಂಭದಲ್ಲಿ ಕೊರೋನಾ ಸೋಂಕಿನ ಗುಣಲಕ್ಷಣಗಳಾದ ಶೀತ ಮತ್ತು ಜ್ವರದಿಂದ ಬಳಲುತ್ತಿದ್ದರೂ ತಾನು ಶೀಘ್ರವೇ ಗುಣಮುಖನಾಗಿ ಡಿಸ್ಚಾರ್ಜ್ ಆಗುತ್ತೇನೆ ಎಂದು ಟ್ವಿಟ್ಟರ್ ಖಾತೆ ಮೂಲಕ ತಿಳಿಸಿದ್ದ ಎಸ್.ಪಿ.ಬಾಲಸುಬ್ರಮಣ್ಯಂ ಅವರು ಆಗಸ್ಟ್ 13 ರಂದು ಆರೋಗ್ಯ ಗಂಭೀರವಾಗಿದ್ದರಿಂದ ಐಸಿಯುಗೆ ದಾಖಲಾಗಿದ್ದರು. ಆದರೆ ಇದೀಗ ಎಂ.ಜಿ.ಎಂ. ಆಸ್ಪತ್ರೆಯ ಐ.ಸಿ.ಯು.ನಲ್ಲಿರುವ ಎಸ್.ಪಿ.ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗೇ ಮುಂದುವರೆದಿದೆ. ಆದ್ದರಿಂದ ಅವರನ್ನು ಐಸಿಯುನಲ್ಲಿ ವೆಂಟಿಲೇಟರ್ ಮೂಲಕ

ಕೃತಕ ಉಸಿರಾಟದಲ್ಲಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ವರದಿ ತಿಳಿಸಿದೆ.

ಕೆ ಟಿವಿ ನ್ಯೂಸ್ ಚೆನ್ನೈ

Add Comment