ಕೊರೋನಾ ಸೋಂಕಿನಿಂದ ಗುಣಮುಖರಾಗಲು ಡಿ.ಕೆ.ಶಿವಕುಮಾರ್ ಗೆ ಸಿಎಂ ಹಾರೈಕೆ

ಕಳೆದ 4 ದಿನಗಳಿಂದ ಬೆನ್ನುನೋವು,ಜ್ವರದಿಂದ ಬಳಲುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನಿನ್ನೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದರಿಂದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ದರಿಂದ ಸಿಎಂ ಯಡಿಯೂರಪ್ಪ ಅವರು ಪಕ್ಷಭೇಧ ಮರೆತು ಕೊರೊನಾ ಸೋಂಕಿತ ಡಿ.ಕೆ.ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಆದಷ್ಟು ಬೇಗ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವಂತೆ ಸಿಎಂ ಯಡಿಯೂರಪ್ಪ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಹಾರೈಸಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment