ದಿಲ್ಲಿಯಲ್ಲಿ ಯಡಿಯೂರಪ್ಪ ಡೈರಿ ಸ್ಫೋಟ – ಹೈಕಮಾಂಡ್ ಗೆ ಕೊಟ್ರಾ 1800 ಕೋಟಿ?

ಮಾಜಿ ಸಿಎಂ ಯಡಿಯೂರಪ್ಪ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಲೋಕಸಭಾ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ಮುಖಂಡರು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿಯ ಕೇಂದ್ರ ನಾಯಕರಿಗೆ 1,800 ಕೋಟಿ ಹಣ ವರ್ಗಾವಣೆ ಮಾಡಿದ್ದಾರೆ ಅಂತಾ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲ ಆರೋಪಿಸಿದ್ದಾರೆ.ಈ ಕುರಿತಾದ ಡೈರಿಯೊಂದನ್ನು ಸುರ್ಜೆವಾಲ ಬಿಡುಗಡೆ ಮಾಡಿದ್ದಾರೆ. ಡೈರಿಯಲ್ಲಿ ಬಿಎಸ್ವೈ ಕೇಂದ್ರ ಸಚಿವರಿಗೆ ಹಣ ವರ್ಗಾವಣೆ ಮಾಡಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ, ಅರುಣ್ ಜೇಟ್ಲಿ, ರಾಜ್ ನಾಥ್ ಸಿಂಗ್, ಪಕ್ಷದ ಹಿರಿಯ ಮುಖಂಡರಾದ ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿದಂತೆ ಅನೇಕ ಕೇಂದ್ರ ನಾಯಕರಿಗೆ ಹಣ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣವನ್ನ ಲೋಕಪಾಲ್ ತನಿಖೆ ನೀಡುವಂತೆ ಆಗ್ರಹಿಸಿದ್ದಾರೆ.

Add Comment