ಫೆ.21 ರಿಂದ ಕರ್ನಾಟಕ -ಭಾರತ್ ಗೌರವ್ ಕಾಶಿ ದರ್ಶನ’ ರೈಲು ಆರಂಭ: ಸಚಿವೆ ಶಶಿಕಲಾ ಜೊಲ್ಲೆ

0

ಬೆಂಗಳೂರು: ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ” ರೈಲು ಪ್ರವಾಸದ ಮೂರನೇ ಟ್ರಿಪ್‌ ಫೆ.21 ರಂದು ಪ್ರಾರಂಭವಾಗಲಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ ತಿಳಿಸಿದ್ದಾರೆ. ಈ ಸಂಬಂಧ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾಶಿ ದರ್ಶನ ರೈಲು ಪ್ಯಾಕೇಜ್‌ ಟೂರ್‌ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು.

ಆ ನಂತರ ನಡೆದಂತಹ 2 ನೇ ಟ್ರಿಪ್‌ ರೈಲು ಪ್ರವಾಸ ಅತ್ಯಂತ ಯಶಸ್ವಿಯಾಗಿ ನಡೆದು. ಮೋದಿಜಿ ಅವರ ಮುತುವರ್ಜಿಯಿಂದ ಪುನರ್‌ ನಿರ್ಮಾಣಗೊಳಿಸಲಾಗಿರುವ ಭವ್ಯ ಕಾಶಿ – ದಿವ್ಯ ಕಾಶಿಯನ್ನು ರಾಜ್ಯದ ಜನರು ಕಡಿಮೆ ವೆಚ್ಚದಲ್ಲಿ ಕಣ್ತುಂಬಿಕೊಂಡಿದ್ದಾರೆ.

ಈ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರೋತ್ಸಾಹ ನೀಡುವ ಮೂಲಕ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ತಿಳಿಸಿದ್ದಾರೆ. ಕರ್ನಾಟಕ – ಭಾರತ್‌ ಗೌರವ್‌ ಕಾಶಿ ದರ್ಶನ” ರೈಲು ಪ್ರವಾಸ ಮೂರನೇ ಟ್ರಿಪ್‌ನ್ನು ಫೆಬ್ರವರಿ 21 ರಂದು ನಿಗದಿ ಮಾಡಲಾಗಿದೆ. 8 ದಿನಗಳ ಈ ಯಾತ್ರೆಯಲ್ಲಿ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್‌ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ಬೆಂಗಳೂರಿಗೆ ಹಿಂದಿರುಗಲಿದೆ. ದಕ್ಷಿಣ ಭಾರತದಲ್ಲೇ ಪ್ರಪ್ರಥಮ ಬಾರಿಗೆ ಭಾರತ್‌ ಗೌರವ್‌ ರೈಲನ್ನ ಪ್ರಾರಂಭಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಪಾತ್ರವಾಗಿದೆ ಎಂದು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed