“ಕ್ಲಿನಿಕಲ್‌ ಸ್ಟಡಿ” ನಡೆಸಿ ವರದಿ ನೀಡಲು ಡಾ.ಸುಧಾಕರ್‌ ಸೂಚನೆ

ಕೊರೋನಾದಿಂದ ಗುಣಮುಖರಾದವರಿಗೆ ಮತ್ತೊಮ್ಮೆ ಕೊರೋನಾ ಕಾಣಿಸಿಕೊಳ್ಳುತ್ತಿರುವ ಪ್ರಕರಣದ ಬಗ್ಗೆ “ಕ್ಲಿನಿಕಲ್ ಸ್ಟಡಿ” ನಡೆಸಿ ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸೌಧದ ಕೊಠಡಿಯಲ್ಲಿ ಕೋವಿಡ್-19 ಟೆಸ್ಟಿಂಗ್ ಕುರಿತು ಟಾಸ್ಕ್‌ ಫೋರ್ಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಫೋರ್ಟಿಸ್‌ನಲ್ಲಿ ಕೋರೋನಾದಿಂದ ಗುಣಮುಖರಾದ‌ 27 ವರ್ಷದ ಮಹಿಳೆಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್ ಬಂದಿರುವ ಬಗ್ಗೆ ಪ್ರಸ್ತಾಪಿಸಿದ ಸುಧಾಕರ್, ಇತರೆ ರಾಷ್ಟ್ರಗಳಲ್ಲಿ ಈ ರೀತಿಯ ಪ್ರಕರಣಗಳು ಕಂಡು ಬಂದಿವೆ. ಇದಕ್ಕೆ ಒಂದೊಂದು ದೇಶದಲ್ಲೂ ಒಂದೊಂದು ರೀತಿ ಕಾರಣ ಕೇಳಿಬಂದಿವೆ ಎಂದಿದ್ದಾರೆ.

Add Comment