ಬೆಂಗಳೂರಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿ ಅರೆಸ್ಟ್

0

ಬೆಂಗಳೂರು: ಬೆಂಗಳೂರಿನಲ್ಲಿ ಸರಗಳ್ಳತನ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಚಂದ್ರ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದರ್ಶನ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು, ವಿಳಾಸ ಕೇಳುವ ನೆಪದಲ್ಲಿ ಬಂದು ಮನೆ ಮುಂದೆ ಕಸಗುಡಿಸುತ್ತಿದ್ದ ಮಹಿಳೆಯ ಬೆಲೆ ಬಾಳುವ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿದ್ದ.

 

ಈ ಸಂಬಂಧ ಸಂತ್ರಸ್ತ ಮಹಿಳೆ ಸ್ಥಳೀಯ ಚಂದ್ರ ಲೇಔಟ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದರು. ದೂರಿನ ಅನ್ವಯ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಬಂಧಿತನಿಂದ 3 ಲಕ್ಷ ಬೆಲೆಬಾಳುವ ಚಿನ್ನದ ಗಟ್ಟಿಗಳನ್ನು ಜಪ್ತಿ ಮಾಡಲಾಗಿದ್ದು, ಚಂದ್ರಾಲೇಔಟ್ ಪೊಲೀಸರಿಂದ ಹೆಚ್ಚಿನ ತನಿಖೆ ಮುಂದುವರಿದಿದೆ.

About Author

Leave a Reply

Your email address will not be published. Required fields are marked *

You may have missed