40 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕರ ಪುತ್ರ

0

ಬೆಂಗಳೂರು: ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ (BJP MLA Madal Virupakshappa) ಪುತ್ರ ಲಂಚ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರ (Karnataka Lokayuktha Police) ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಮುಖ್ಯ ಅಕೌಂಟೆಂಟ್ ಪ್ರಶಾಂತ್ ಮಾಡಾಳ್‌ (Prashanth Madal) ಲೋಕಾಯಕ್ತ ಬಲೆಗೆ ಬಿದ್ದ ಅಧಿಕಾರಿ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ವಸ್ತು ಖರೀದಿ ಸಂಬಂಧ ಟೆಂಡರ್‌ ಅನುಮೋದನೆಗೆ 80 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದ ಪ್ರಶಾಂತ್ ಮಾಡಲ್ 40 ಲಕ್ಷ ರೂ. ಪಡೆಯುತ್ತಿದ್ದಾಗ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಆರೋಪಏನು?
ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ಪ್ರಶಾಂತ್, ನಿಯೋಜನೆ ಮೇಲೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ 81 ಲಕ್ಷ‌ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಪ್ರಶಾಂತ್‌ ಮಾಡಲ್‌ ಇದ್ದ ಕೆಕೆ ಗೆಸ್ಟ್‌ಹೌಸ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ದಾಳಿಯ ಮುಂದುವರಿದ ಭಾಗವಾಗಿ ಡಾಲರ್ಸ್‌ ಕಾಲೋನಿ ನಿವಾಸದಲ್ಲೂ ಲೋಕಾ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

About Author

Leave a Reply

Your email address will not be published. Required fields are marked *

You may have missed