ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ

0

ಬೆಂಗಳೂರು: ಮಾಡಾಳ್‌ ವಿರೂಪಾಕ್ಷಪ್ಪ (Madal Virupakshappa) ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿ ವಜಾಗೊಂಡಿದ್ದು ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆಯಿದೆ.

ಇಂದು ಹೈಕೋರ್ಟ್‌ (High Court) ವಿಚಾರಣೆಯ ವೇಳೆ ಲೋಕಾಯುಕ್ತ ಪರ ವಕೀಲರು ಜಾಮೀನು ಅರ್ಜಿಗೆ ಪ್ರಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದರು.

ಅಂತಿಮವಾಗಿ ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಕೆಎಸ್‌ಡಿಎಲ್ ಟೆಂಡರ್ (KSDL) ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್‌ 7 ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಜೂರು ಮಾಡಿತ್ತು.

ಪುತ್ರ ಪ್ರಶಾಂತ್‌ ಮಾಡಾಳ್‌ ಹಣದೊಂದಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್‌ ಆಗಿದ್ದರು. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಅಭಿಮಾನಿಗಳು ಜಯಘೋಷ ಹಾಕಿ ಸ್ವಾಗತಿಸಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾಗಿತ್ತು.

About Author

Leave a Reply

Your email address will not be published. Required fields are marked *

You may have missed