ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ ಸಾಧ್ಯತೆ

0

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ.

ಇನ್ನೂ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ,

ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಉತ್ತರ ಒಳನಾಡು ಮತ್ತು ಕರಾವಳಿ ಕೆಲವೆಡೆ ಸರಾಸರಿ 3-4 ಕನಿಷ್ಠ ಉಷ್ಣಾಂಶ ಇಳಿಕೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

About Author

Leave a Reply

Your email address will not be published. Required fields are marked *

You may have missed