ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಮೇಲಿಂದ ಬಿದ್ದು ಮಹಿಳೆ ಆತ್ಮಹತ್ಯೆ..!

0

ಬೆಂಗಳೂರು: ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ಜರುಗಿದೆ.

ಸೋನು ಪೂಜಾರಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ಗುರುತಿಸಲಾಗಿದೆ. ಸೋನು ಪೂಜಾರಿ ಮಂಗಳವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಅಪಾರ್ಟೆಮೆಂಟ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸೋನು ಪೂಜಾರಿ ಅವರ ಪತಿ ನಿರಂಜನ್ ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದರು.

ಹೀಗಾಗಿ ಮನೆಯಲ್ಲಿ ಅವರು ಒಬ್ಬಂಟಿಯಾಗಿ ಇದ್ದರು ಎನ್ನಲಾಗಿದೆ. ಇತ್ತ ತಡರಾತ್ರಿವರೆಗೂ ಸೋನು ಮೊಬೈಲ್‌ನಲ್ಲಿ ಯಾರೊಟ್ಟಿಗೋ ಮಾತನಾಡುತ್ತಾ ಜಗಳವಾಡುತ್ತಿದ್ದರು ಎಂದು ಅಕ್ಕ ಪಕ್ಕದ ಮನೆಯವರು ತಿಳಿಸಿದ್ದಾರೆ. ರಾತ್ರಿ 1 ಗಂಟೆಗೆ ಫೋನ್‌ನಲ್ಲಿ ಜೋರಾಗಿ ಕಿರುಚಾಡುತ್ತಿದ್ದರು ಎಂದು ಪೊಲೀಸರಿಗೂ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸದ್ಯ ಮುಂಬೈನಲ್ಲಿರುವ ಪತಿ ನಿರಂಜನ್‌ಗೆ ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಯಾರ ಜತೆ ಫೋನ್ ಮಾತನಾಡುತ್ತಿದ್ದರು ಎಂದು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed