ಕಾಂಗ್ರೆಸ್‌ಗೆ ಹಿನ್ನಡೆ : ವಿನಯ್‌ ಕುಲಕರ್ಣಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುವಂತಿಲ್ಲ

0

ಬೆಂಗಳೂರು: ವಿಧಾನಸಭಾ ಚುನಾವಣೆಯ (Karnataka Election) ಸಮಯದಲ್ಲಿ ಧಾರವಾಡಕ್ಕೆ ತೆರಳಲು ಅನುಮತಿ ಕೋರಿ ಮಾಜಿ ಸಚಿವ ವಿನಯ್‌ ಕುಲಕರ್ಣಿ (Vinay Kulkarni) ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು ಕಾಂಗ್ರೆಸ್‌ಗೆ (Congress) ಹಿನ್ನಡೆಯಾಗಿದೆ.

 

ಧಾರವಾಡ ಬಿಜೆಪಿ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣ (Yogesh Gowda Murder Case) ಸಂಬಂಧ ಧಾರವಾಡ ಪ್ರವೇಶಕ್ಕೆ (Dharwad Entry) ಅನುಮತಿ ಕೋರಿ ವಿನಯ್ ಕುಲಕರ್ಣಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಲ್ಲಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್‌ 15 ರಂದು ವಿನಯ್‌ ಕುಲಕರ್ಣಿ ಅವರ ಅರ್ಜಿಯ ವಿಚಾರಣೆಯನ್ನು ಪೂರ್ಣ ಮಾಡಿದ್ದ ಕೋರ್ಟ್‌ ಏಪ್ರಿಲ್‌ 18ಕ್ಕೆ ತೀರ್ಪು ಕಾಯ್ದಿರಿಸಿತ್ತು.

ಸಿಬಿಐವಾದಏನಿತ್ತು?
ಯೋಗೇಶ್‌ ಗೌಡ ಪ್ರಕರಣದ 120 ಸಾಕ್ಷಿಗಳ ಪೈಕಿ 90 ಮಂದಿ ಧಾರವಾಡದವರೇ ಆಗಿದ್ದಾರೆ. ವಿನಯ್‌ ಕುಲಕರ್ಣಿಗೆ ಕ್ಷೇತ್ರಕ್ಕೆ ಪ್ರವೇಶ ನೀಡಿದರೆ ಆದೇಶ ದುರುಪಯೋಗವಾಗಬಹುದು. ಮುಂದೆ ವಿಚಾರಣೆಗೆ ಸಮಸ್ಯೆಯಾಗಬಹುದು. ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಯಿದೆ. ಯಾವುದೇ ಕಾರಣಕ್ಕೂ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಸಿಬಿಐ ಪರ ವಕೀಲರು ಬಲವಾದ ವಾದ ಮಂಡಿಸಿದ್ದರು.

ಅರ್ಜಿಹಾಕಿದ್ದುಯಾಕೆ?
ಯೋಗೇಶ್‌ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ವಿನಯ್‌ ಕುಲಕರ್ಣಿಯನ್ನು ಸಿಬಿಐ (CBI) ಬಂಧಿಸಿತ್ತು. ಜಾಮೀನು ಮಂಜೂರು ಮಾಡುವಾಗ ಧಾರವಾಡ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್‌ ಷರತ್ತು ವಿಧಿಸಿತ್ತು. ಆದರೆ ಅನಿವಾರ್ಯ ಇದ್ದಾಗ ಮಾತ್ರ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದ ಕಾರಣ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿ ಪ್ರವೇಶಕ್ಕೆ ಮನವಿ ಮಾಡಿದ್ದರು.

About Author

Leave a Reply

Your email address will not be published. Required fields are marked *

You may have missed