ಬೈಕ್ ಗೆ ಡಿಕ್ಕಿ ಹೊಡೆದ ಲಾರಿ-ಬೈಕ್ ಸವಾರ ಸಾವು-ಲಾರಿ ಚಾಲಕ ಪರಾರಿ

ಕಬ್ಬು ತುಂಬಿದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇರುವ ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ಶ್ರೀರಂಗಪಟ್ಟಣ ತಾಲ್ಲೂಕಿನ ಬಲ್ಕೇನಹಳ್ಳಿ ಗ್ರಾಮದ ಹನುಮಂತು(45) ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಈ ಭೀಕರ ಅಪಘಾತದಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹನುಮಂತು ಸ್ಥಳದಲ್ಲೇ ಸಾವನ್ನಪ್ಪಿದ್ದ. ಆತನ ಮೃತ ದೇಹ ತುಂಡು ತುಂಡಾಗಿ ಕತ್ತರಿಸಿ ರಸ್ತೆಯಲ್ಲೇ ಬಿದ್ದಿತ್ತು. ಈ ಭೀಕರ ಅಪಘಾತಕ್ಕೆ ಕಾರಣನಾದ ಲಾರಿ ಚಾಲಕ ಜೆದರಿ ಲಾರಿಯನ್ನು ಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಶ್ರೀರಂಗಪಟ್ಟಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಮಂಡ್ಯ ವಾಸಿ ಹನುಮಂತು ತಾಲ್ಲೂಕಿನ ಬಲ್ಲೇನಹಳ್ಳಿ ಗ್ರಾಮದ ಬೆಟ್ಟೇಗೌಡರ ಪುತ್ರ ಎಂದು
ಗುರುತಿಸಿದ್ದಾರೆ. ಸ್ವಗ್ರಾಮ ಬೆಟ್ಡೇನಹಳ್ಳಿಗೆ ಹನುಮಂತು ಬೈಕ್
ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ರಸ್ತೆಯಲ್ಲೇ ತುಂಡಾಗಿ ಬಿದ್ದಿದ್ದ ಹನುಮಂತು ಮೃತದೇಹವನ್ನು
ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿದ ಶ್ರೀರಂಪಟ್ಟಣ ಠಾಣೆ ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿದ್ದಾರೆ.
ಕೆ ಟಿವಿ ನ್ಯೂಸ್ ಮಂಡ್ಯ

Add Comment