ರಾಜ್ಯದಲ್ಲಿ ಮಂಗಳವಾರ 9,993 ಜನರಿಗೆ ಕೊರೊನಾ,10,228 ಸೋಂಕಿತರು ಗುಣಮುಖ

ರಾಜ್ಯದಲ್ಲಿ 9,993 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢವಾಗಿದೆ‌. ಈ ಪೈಕಿ ಬೆಂಗಳೂರಿನಲ್ಲೇ 5,012 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದ ಕೊರೊನಾ ಸೋಂಕಿತರ ಸಂಖ್ಯೆ 6,57,705 ಕ್ಕೆ ಏರಿಕೆಯಾಗಿದೆ.
ಈ ಪೈಕಿ ಬೆಂಗಳೂರಿನಲ್ಲಿ ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ 2,57,241 ಕ್ಕೆ ಏರಿದೆ.
ರಾಜ್ಯದಲ್ಲಿ ಮಂಗಳವಾರ ಒಟ್ಟು 91 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 34 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು 9,146 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ ಈವರೆಗೆ 3,125 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಆದರೆ ರಾಜ್ಯದಲ್ಲಿ ಮಂಗಳವಾರ 10,228 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಒಟ್ಟಾರೆ ಈವರೆಗೆ ರಾಜ್ಯದಲ್ಲಿ 5,33,074 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಒಟ್ಟಾರೆ ರಾಜ್ಯದಲ್ಲಿ 1,15,251 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಈ ಪೈಕಿ 848 ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment