ಮಂಡ್ಯ ಜನರ ಮನ ಗೆದ್ದ ಬುಲ್ಡೋಜರ್ ಬಾಬಾ: ಕುವೆಂಪುರವರ ನಾಡಗೀತೆ ಹಾಡಿದ ಯೋಗಿ

0

ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹಿನ್ನೆಲೆಯಲ್ಲಿ ಬಿಜೆಪಿಯ ಘಟಾನುಘಟಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಾ, ಮತದಾರನ್ನ ಸೆಳೆಯಲು ನಾನಾ ತಂತ್ರಗಾರಿಗೆ ಹೆಣೆಯುತ್ತಿದ್ದಾರೆ.

 

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರೂ ಬುಧವಾರ ಕರ್ನಾಟಕಕ್ಕೆ ಆಗಮಿಸಿದ್ದು, ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯ (Mandya) ಜಿಲ್ಲೆಯಲ್ಲಿ ಬಿಜೆಪಿ (BJP) ಪರವಾಗಿ ಪ್ರಚಾರ ಕಾರ್ಯಕ್ರಮ ನಡೆಸಿದ್ದಾರೆ. ಮಂಡ್ಯಕ್ಕೆ ಬರುತ್ತಿದ್ದಂತೆ ಅದ್ಧೂರಿ ರೋಡ್ ಶೋ (YogiAdityanath RoadShow) ನಡೆಸಿದ ಯುಪಿ ಸಿಎಂ, ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ಮಾತನಾಡಿ ಮಂಡ್ಯ ಜನರ ಮನಗೆದ್ದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸಹ ಕರ್ನಾಟಕಕ್ಕೆ ಭೇಟಿ ನೀಡಿದಾಗಲೆಲ್ಲಾ ಪ್ರತೀ ಕಾರ್ಯಕ್ರಮದಲ್ಲೂ `ಕರ್ನಾಟಕದ ಜನತೆಗೆ ನನ್ನ ನಮಸ್ಕಾರಗಳು’ ಎಂದು ಹೇಳುವ ಮೂಲಕ ಕನ್ನಡದಲ್ಲೇ ಭಾಷಣ ಆರಂಭಿಸುತ್ತಾರೆ. ಅದರಂತೆ ಯೋಗಿ ಆದಿತ್ಯನಾಥ್ ಅವರೂ ಕನ್ನಡದಲ್ಲಿ ಭಾಷಣ ಆರಂಭಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed