ಪ್ರಭಾಕರ್ ರೆಡ್ಡಿ, ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ.!

0

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ (Karnataka Election 2023) ಅಖಾಡ ರಂಗೇರಿದೆ. ಚುನಾವಣೆಗೆ ದಿನಗಣನೆ ಬಾಕಿಯಿದ್ದರೂ ಪಕ್ಷಾಂತರ ಪರ್ವ ಮುಂದುವರಿದಿದೆ. ಈ ನಡುವೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಡಿಕೆ ಬ್ರದರ್ಸ್ ಕನಕಪುರದಲ್ಲಿ ಟಕ್ಕರ್ ಕೊಟ್ಟಿದ್ದಾರೆ.

2018ರ ಚುನಾವಣೆಗೆ ಕನಕಪುರದಲ್ಲಿ ಡಿಕೆಶಿ ವಿರುದ್ಧವೇ ಜೆಡಿಎಸ್‌ನಿಂದ (JDS) ಕಣಕ್ಕಿಳಿದಿದ್ದ ನಾರಾಯಣಗೌಡ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಭಾಕರ ರೆಡ್ಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

 

 

ಗುರುವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹಾಗೂ ಸಂಸದ ಡಿ.ಕೆ ಸುರೇಶ್ (DK Suresh) ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಪ್ರಭಾಕರ ರೆಡ್ಡಿ ಈ ಬಾರಿಯೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಜೆಡಿಎಸ್‌ನಿಂದ ಡಿಕೆಶಿ ಆಪ್ತೆ ಸುಷ್ಮಾ ರಾಜಗೋಪಾಲ್‌ಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಪ್ರಭಾಕರ್ ಪಕ್ಷಾಂತರ ಮಾಡಿದ್ದಾರೆ ಎನ್ನಲಾಗಿದೆ.

About Author

Leave a Reply

Your email address will not be published. Required fields are marked *

You may have missed