ಪ್ರಧಾನಿ ಮೋದಿ ಅವರು ಭಾರತವನ್ನು ಪಾತಾಳದತ್ತ ಎಳೆದೊಯ್ಯುತ್ತಿದ್ದಾರೆ: ವಿಪಕ್ಷ ನಾಯಕ ಸಿದ್ದರಾಮಯ್ಯ

0

ಬೆಂಗಳೂರು: ಪ್ರಧಾನಿ ಮೋದಿ ಅವರು ಭಾರತವನ್ನು ಪಾತಾಳದತ್ತ ಎಳೆದೊಯ್ಯುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Opposition leader Siddaramaiah) ಆರೋಪಿಸಿದ್ದಾರೆ. ಈ ಸಂಬಂಧ ಶಿವಾನಂದ ವೃತ್ತದ ನಿವಾಸದಲ್ಲಿ ಪ್ರಕಟಣೆ ಹೊರಡಿಸಿದ ಅವರು, ಮೋದಿ ಸಹಿತ ಬಿಜೆಪಿ ನಾಯಕರು ‘ಕರ್ನಾಟಕವನ್ನು ನಂಬರ್ ಒನ್ ಮಾಡುತ್ತೇವೆ’ ಎನ್ನುತ್ತಾರೆ.

ಮೋದಿಯವರು ಹೋದ ಎಲ್ಲ ರಾಜ್ಯಗಳಲ್ಲೂ ಹೀಗೆ ಹೇಳುತ್ತಾರೆ. ಇಷ್ಟಕ್ಕೂ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿಯೆ ಕರ್ನಾಟಕವು ಅನೇಕ ವಿಚಾರಗಳಲ್ಲಿ ನಂಬರ್ ಒನ್ ಆಗಿತ್ತು. ಕೈಗಾರಿಕೆ, ಸೇವಾ ವಲಯಗಳಲ್ಲಿ ನಾವು ಮುಂದೆಯೇ ಇದ್ದೆವು.

ಈ ಪ್ರತಿಷ್ಠೆಯನ್ನು ಹಾಳು ಮಾಡಿದ್ದೆ ಬಿಜೆಪಿ ಸರಕಾರ’ ಎಂದು ವಾಗ್ದಾಳಿ ನಡೆಸಿದ್ದಾರೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ 2ನೆ ಸ್ಥಾನದಲ್ಲಿದೆ. ಎಪ್ರಿಲ್ ತಿಂಗಳ ಜಿಎಸ್‍ಟಿ ಸಂಗ್ರಹದಲ್ಲಿ ಮಹಾರಾಷ್ಟ್ರ 33.19ಸಾವಿರ ಕೋಟಿ ರೂ. ಸಂಗ್ರಹಿಸಿದ್ದರೆ, ಕರ್ನಾಟಕ 14.59ಸಾವಿರ ಕೋಟಿ ರೂ.ಸಂಗ್ರಹಿಸಿದೆ. ತಮಿಳುನಾಡು 11.55, ಗುಜರಾತ್ 11.72 ಸಾವಿರ ಕೋಟಿ ರೂ.ಸಂಗ್ರಹಿಸಿವೆ. ರಾಜ್ಯದಿಂದ ಈ ವರ್ಷ 2.4-2.5 ಲಕ್ಷ ಕೋಟಿ ರೂ.ಗಳಷ್ಟು ಆದಾಯ ತೆರಿಗೆ ಸಂಗ್ರಹವಾಗುವ ನಿರೀಕ್ಷೆಯಿದೆ. ಈ ಎರಡರಿಂದಲೆ ಮೋದಿ ಸರಕಾರ ನಮ್ಮ ರಾಜ್ಯದಿಂದ 4.2 ಲಕ್ಷ ಕೋಟಿ ರೂ.ವರೆಗೆ ತೆರಿಗೆ ಸಂಗ್ರಹಿಸುತ್ತದೆ.

ಐಟಿ ರಫ್ತಿನಲ್ಲಿ ರಾಜ್ಯದ ಪಾಲು ಶೇ.50ಕ್ಕೂ ಹೆಚ್ಚಿಗೆ ಇದೆ. ಆದರೆ ಮೋದಿ ಸರಕಾರ ನಮಗೆ ನೀಡುವ ತೆರಿಗೆ ಪಾಲು 37 ಸಾವಿರ ಕೋಟಿ ರೂ.ಮಾತ್ರ. ತೆರಿಗೆ ಹಂಚಿಕೆಯ ದರದಲ್ಲಿ ಇಡೀ ದೇಶದಲ್ಲಿಯೆ ಅತ್ಯಂತ ಕಡಿಮೆ ಪಾಲು ಪಡೆಯುವ ರಾಜ್ಯ ಕರ್ನಾಟಕ. ನಮಗೆ ಶೇ.42ರಷ್ಟು ಪಾಲು ಕೊಟ್ಟರೆ ವರ್ಷಕ್ಕೆ 2ಲಕ್ಷ ಕೋಟಿ ರೂ.ಗೂಹೆಚ್ಚು ಪಾಲನ್ನು ಕೊಡಬೇಕು. ಕೊಡಬೇಕಾದ್ದನ್ನು ಕೊಡದೆ ಕರ್ನಾಟಕವನ್ನು ದಮನಿಸುತ್ತಿರುವುದೆ ಬಿಜೆಪಿ ಸರಕಾರ. ಈ ಕುರಿತು ಮೋದಿಯವರು ಉಸಿರು ಬಿಡುತ್ತಿಲ್ಲ’ ಎಂದು ಅವರು ದೂರಿದ್ದಾರೆ.

About Author

Leave a Reply

Your email address will not be published. Required fields are marked *

You may have missed