ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ ಆರೋಪ: ರಕ್ಷಣಾ ಸಂಸ್ಥೆಯ ವಿಜ್ಞಾನಿ ಬಂಧನ

0

ಮುಂಬೈ: ಪಾಕಿಸ್ತಾನಿ ಏಜೆಂಟ್‍ಗೆ ಗೌಪ್ಯ ಮಾಹಿತಿ ರವಾನೆ ಮಾಡಿದ ಆರೋಪದ ಮೇಲೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಜ್ಞಾನಿಯೊಬ್ಬರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿ ವಿಚಾಣೆ ನಡೆಸುತ್ತಿದ್ದಾರೆ.

 

ಅಧಿಕಾರಿಯೂ ವಾಟ್ಸಾಪ್ ಮತ್ತು ವೀಡಿಯೊ ಕರೆಗಳ ಮೂಲಕ ಪಾಕಿಸ್ತಾನ ಗುಪ್ತಚರ ಏಜೆಂಟ್‍ನೊಂದಿಗೆ ಸಂಪರ್ಕ ಹೊಂದಿದ್ದರು ಎನ್ನಲಾಗುತ್ತಿದೆ. ಆರೋಪಿಯನ್ನು ಹನಿಟ್ರ್ಯಾಪ್ ಮೂಲಕ ಬೆದರಿಸಿ ಕೃತ್ಯಕ್ಕೆ ಬಳಸಿಕೊಳ್ಳುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಹೆಚ್ಚಿನ ಮಾಹಿತಿ ತನಿಖೆ ನಂತರ ತಿಳಿಯಲಿದೆ ಎಂದು ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ಶತ್ರು ದೇಶಗಳಿಗೆ ತನ್ನ ಬಳಿಯಿರುವ ರಹಸ್ಯ ಮಾಹಿತಿಗಳನ್ನು ಒದಗಿಸಿದರೆ ದೇಶದ ಭದ್ರತೆಗೆ ಅಪಾಯವನ್ನುಂಟುಮಾಡಬಹುದು ಎಂದು ತಿಳಿದಿದ್ದರೂ ಆರೋಪಿ ಮಾಹಿತಿ ನೀಡಿದ್ದಾನೆ. ಈ ಮೂಲಕ ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ವಿರುದ್ಧ ಮುಂಬೈನ ಕಲಾಚೌಕಿ ಎಟಿಎಸ್ ಘಟಕದಲ್ಲಿ ಅಧಿಕೃತ ರಹಸ್ಯ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

About Author

Leave a Reply

Your email address will not be published. Required fields are marked *

You may have missed