ಶಿವಣ್ಣನಿಗೆ ಟಾಂಗ್ ಕೊಟ್ಟ ಸಂಸದ ಪ್ರತಾಪ್ ಸಿಂಹ

0

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವಾಗಿ ನಟ ಶಿವರಾಜ್ ಕುಮಾರ್ ವರುಣ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಈ ಕುರಿತು ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋಮಣ್ಣನನ್ನು ಹೊಗಳುವ ಮೂಲಕ ಶಿವಣ್ಣನಿಗೆ ಪ್ರತಾಪ್ ಸಿಂಹ ಟಾಂಗ್ ನೀಡಿದ್ದಾರೆ.

 

ಪ್ರತಾಪ್ ಸಿಂಹ ಟ್ವೀಟ್ ಮಾಡಿ, ‘ಪುನೀತ್ ರಾಜ್ ಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ. ಮನೆಮೆಚ್ಚಿ ಶ್ಲ್ಯಾಘಿಸಿದ ರಾಘಣ್ಣ, ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ. ಅವರವರ ಭಾವ ಭಕುತಿಗೆ’ ಎಂದು ಬರೆದುಕೊಂಡಿದ್ದಾರೆ.

ನಟ ಶಿವರಾಜ್ ಕುಮಾರ್ ಕಳೆದ ಎರಡು ಮೂರು ದಿನಗಳಿಂದ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮಧು ಬಂಗಾರಪ್ಪ ಪರವಾಗಿ ಸೊರಬದಲ್ಲಿ ಮತಯಾಚನೆ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed