ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ನೀಡಿದ ಬಿಎಸ್‌ವೈ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ ನೀಡಿದರು. ಇಂದು ಬೆಳಗ್ಗೆಯೇ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಅವರು, ತಾಯಿಗೆ ಅಗ್ರಪೂಜೆ ಸಲ್ಲಿಸಿ ಬಳಿಕ ಉದ್ಘಾಟನೆಯಲ್ಲಿ ಪಾಲ್ಗೊಂಡರು. ಇನ್ನು ಹೃದ್ರೋಗ ತಜ್ಞ ಡಾ.ಸಿ.ಎನ್ ಮಂಜುನಾಥ್ ಅವರು ದಸರಾ ಉದ್ಘಾಟನೆ ಮಾಡಿದರು. ಇನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಮ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೇಯರ್ ತಸ್ನಿಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Add Comment