ಶಿರಸಿ: ಗೋಮಾಂಸ ಮಾರುತ್ತಿದ್ದ ಇಬ್ಬರ ಬಂಧನ

ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉತ್ತರಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ನಗರದ ಕರಿಗುಂಡಿ ರಸ್ತೆಯಲ್ಲಿ ಅಕ್ರಮವಾಗಿ ಗೋಮಾಂಸ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಶಿರಸಿಯ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಖಚಿತ ಮಾಹಿತಿ ಪಡೆದು ಅಲ್ಲಿಗೆ ಹೋಗಿ ದಾಳಿ ನಡೆಸಿದ್ದಾರೆ. ಆಗ ಗೋಮಾಂಸ ಮಾರಾಟ ಮಾಡುತ್ತಿದ್ದ ಅಕ್ಕಿ ಆಲೂರು ಮೂಲದ ಮಹ್ಮದ್ ಸಲೀಂ ತಂದೆ ಮಾಬುಸಾಬ ಬೇಪಾರಿ ಹಾಗೂ ಬಾಷಾಸಾಬ ತಂದೆ ಅಬ್ದುಲ್ ಖಾದರಾಸಾಬ ಬಹದ್ದೂರ್ ಅವರನ್ನು‌ ಹೊಸ ಮಾರುಕಟ್ಟೆ ಪೊಲೀಸರು ಬಂಧಿಸಿದರು. ಈ ಇಬ್ಬರು ಬಂಧಿತರಿಂದ 450 ಗ್ರಾಂ ತೂಕದ ಗೋಮಾಂಸವನ್ನು ವಶಪಡಿಸಿಕೊಂಡಿರುವ ಶಿರಸಿ ನಗರದ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೆ ಟಿವಿ ನ್ಯೂಸ್ ಶಿರಸಿ

Add Comment