ಮಳೆ-ನೆರೆಹಾವಳಿ ನಷ್ಟಕ್ಕೆ ಸೂಕ್ತ ಪರಿಹಾರ-ಸಿಎಂ ಭರವಸೆ

ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಿನಿಂದ ಸೆಪ್ಟೆಂಬರ್ ವರೆಗೆ ಸುರಿದ ಭಾರಿ ಮಳೆ ಮತ್ತು ನೆರೆಪ್ರವಾಹದಿಂದ ಪ್ರಾಕೃತಿಕವಾಗಿ
9,952 ಕೋಟಿ ರೂ. ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ನಾಡಹಬ್ಬ ದಸರಾ ಉತ್ಸವ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ
“ರಾಜ್ಯದಲ್ಲಿ ಕಳೆದ ಆಗಸ್ಟ್ ನಿಂದ ಸೆಪ್ಟೆಂಬರ್ ವರೆಗೆ ಸುರಿದ ಭಾರಿ ಮಳೆಯಿಂದ ಒಟ್ಟು 9,952 ಕೋಟಿ ರೂ. ಪ್ರಾಕೃತಿಕ ನಷ್ಟ ಸಂಭವಿಸಿದೆ. ಈಗ ನಾನು ಪ್ರವಾಹಪೀಡಿತ ಜಿಲ್ಲೆಗಳ ಜನರೊಂದಿಗೆ ಸಂಪರ್ಕದಲ್ಲಿದ್ದೇನೆ,ಮಳೆ-ನೆರೆಹಾವಳಿಯಿಂದ ತೊಂದರೆಗೊಳಗಾದ ಎಲ್ಲಾ ಜನರಿಗೂ ಅಗತ್ಯ ನೆರವನ್ನು ಒದಗೊಸಲಾಗುವುದು” ಎಂದು ಅಭಯ ಹೇಳಿದರು.
ಅಲ್ಲದೆ ರಾಜ್ಯದಲ್ಲಿ ಒಟ್ಟು 10.07 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪ್ರಾಕೃತಿಕ ವಿಕೋಪ ತಡೆ ಯೋಜನೆ ಜಾರಿಯಲ್ಲಿದೆ. ಇದರಿಂದ ಭಾರಿ ಮಳೆ-ನೆರೆಹಾವಳಿಯಿಂದ ತೊಂದರೆಗೊಳಗಾದವರಿಗೆ ಒಂದು ವಾರದೊಳಗಾಗಿ ಸೂಕ್ತ ಪರಿಹಾರ ಸಿಗಲಿದೆ” ಎಂದು ಮಾಹಿತಿ ನೀಡಿದರು.
ಒಟ್ಟಾರೆ ಮಳೆಯಿಂದ 4,851 ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ” ಎಂದು ಸವಿವರ ನೀಡಿದರು.
ಕೆ ಟಿವಿ ನ್ಯೂಸ್ ಮೈಸೂರು

Add Comment