ರಾಜ್ಯದಲ್ಲಿ ಶನಿವಾರ 8,893 ಕೊರೊನಾ ಸೋಂಕಿತರು ಗುಣಮುಖ

ರಾಜ್ಯದಲ್ಲಿ ಶನಿವಾರ ಹೊಸದಾಗಿ 7,184 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕ ರಾಜಧಾನಿ ಬೆಂಗಳೂರಿನಲ್ಲಿ 3,374 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಇದುವರೆಗೆ 7,58,574 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಅಲ್ಲದೆ ರಾಜ್ಯದಲ್ಲಿ ಶನಿವಾರ 71 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಪೈಕಿ ರಾಜಧಾನಿ ಬೆಂಗಳೂರಿನಲ್ಲಿ 14
ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಇದುವರೆಗೆ 10,427 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಆದರೆ ರಾಜ್ಯದಲ್ಲಿ ಶನಿವಾರ 8,893 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 4,251 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಒಟ್ಟಾರೆ ರಾಜ್ಯದಲ್ಲಿ ಈವರೆಗೆ 6,37,481 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಆದರೆ ರಾಜ್ಯದಲ್ಲಿ ಇನ್ನೂ 1,10,647 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪೈಕಿ 940 ಕೊರೊನಾ ಸೋಂಕಿತರು ಐಸಿಯುನಲ್ಲಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment