ವಿಶ್ವವಿಖ್ಯಾತ ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ..!

0

ತಿರುಪತಿ: ವಿಶ್ವವಿಖ್ಯಾತ ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಭಾರಿ ಭದ್ರತಾ ವೈಫಲ್ಯ (security lapse) ಉಂಟಾಗಿದ್ದು ನಿಷೇಧದ ಹೊರತಾಗಿಯೂ ದೇವಸ್ಥಾನದ ಒಳಗೆ ಮೊಬೈಲ್‌ ತೆಗೆದುಕೊಂಡು ಹೋದ ಭಕ್ತನೊಬ್ಬ ದೇಗುಲದ ಗೋಪುರ ಹಾಗೂ ಇತರ ಭಾಗಗಳನ್ನು ಚಿತ್ರೀಕರಿಸಿದ್ದಾನೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆದ ಬಳಿಕ ಕೃತ್ಯ ಬೆಳಕಿಗೆ ಬಂದಿದೆ.

ಚಿನ್ನದ ಲೇಪಿತ ಆನಂದ ನಿಲಯಂ (ಗೋಪುರ) (Ananda Nilayam) ಹಾಗೂ ವಿಮಾನ ಪ್ರಕಾರಂ (ಗರ್ಭಗುಡಿಗೆ ಸುತ್ತಲಿನ ಭಾಗ) ಭಾಗಗಳನ್ನು ಚಿತ್ರೀಕರಿಸಲಾಗಿದೆ. ಇದರ ಬೆನ್ನಲ್ಲೇ ದೇವಸ್ಥಾನ ಮಂಡಳಿಯು ಘಟನೆ ಕುರಿತು ತನಿಖೆಗೆ ಆದೇಶಿಸಿದೆ. ಪ್ರಾಥಮಿಕ ಹಂತದಲ್ಲಿ ಭದ್ರತಾ ಲೋಪವನ್ನು ತಡೆಗಟ್ಟುವಲ್ಲಿ ವಿಫಲವಾದ ಕಾರಣ ದೇವಸ್ಥಾನದ ಭದ್ರತಾ ವಿಭಾಗವು ತನಿಖೆ ಎದುರಿಸಬೇಕಾಗುತ್ತದೆ ಎನ್ನಲಾಗಿದೆ.

ದೇವಸ್ಥಾನದ ಒಳಗೆ ಯಾವುದೇ ರೀತಿಯ ಎಲೆಕ್ಟ್ರಾನಿಕ್‌ ಸಾಧನಗಳನ್ನು(Electronic) ನಿಷೇಧಿಸಲಾಗಿದೆ. ಆದರೂ ವಿಡಿಯೋ ಚಿತ್ರೀಕರಿಸಿರುವ ಅಪರಿಚಿತ ಭಕ್ತಾದಿ, ಭದ್ರತಾ ಸಿಬ್ಬಂದಿಯನ್ನು ದಾಟಿ ಹೇಗೆ ಮೊಬೈಲ್‌ ಅಥವಾ ಕ್ಯಾಮರಾ ಕೊಂಡೊಯ್ದು ವಿಡಿಯೋ ಮಾಡಿದ್ದಾನೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಭಾನುವಾರ ತಿರುಮಲದಲ್ಲಿ ಸುರಿದ ಧಾರಾಕಾರ ಮಳೆಯಿಂದ 2 ಗಂಟೆಗಳ ಕಾಲ ವಿದ್ಯುತ್‌ ವ್ಯತ್ಯಯ ಉಂಟಾಗಿತ್ತು. ಇದೇ ವೇಳೆ ಘಟನೆ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಪತ್ತೆಗೆಕ್ರಮ:

‘ಮಾಹಿತಿ ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಮೊದಲು ಜಾಲತಾಣದಲ್ಲಿ ವೀಡಿಯೋ ಎಲ್ಲಿ ಮತ್ತು ಯಾರು ಅಪ್ಲೋಡ್‌ ಮಾಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುವುದು. ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಟಿಟಿಡಿಯ (TTD) ಮುಖ್ಯ ಭದ್ರತಾ ಅಧಿಕಾರಿ ಡಿ ನರಸಿಂಹ ಕಿಶೋರ್‌ (Narasimha Kishore) ತಿಳಿಸಿದ್ದಾರೆ. ಅಲ್ಲದೇ ದೇವಾಲಯದ ಒಳಾಂಗಣ ಹಾಗೂ ಹೊರಾಂಗಣ ಭಾಗಗಳಲ್ಲಿ ಳವಡಿಸಲಾದ ಎಲ್ಲ ಸಿಸಿಟಿವಿ ದೃಶ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದೇವೆ ಎಂದಿದ್ದಾರೆ.

About Author

Leave a Reply

Your email address will not be published. Required fields are marked *

You may have missed