ಆರ್.ಆರ್.ನಗರ ಉಪಚುನಾವಣೆ-ಲಗ್ಗೆರೆ ವಾರ್ಡ್ ಜೆಡಿಎಸ್ ನಿಕಟಪೂರ್ವ ಕಾರ್ಪೊರೇಟರ್ ಮಂಜುಳಾ ನಾರಾಯಣಸ್ವಾಮಿ ಬಿಜೆಪಿ ಸೇರ್ಪಡೆ

ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಲಗ್ಗೆರೆ ವಾರ್ಡ್ ನ ಬಿಬಿಎಂಪಿ ನಿಕಟಪೂರ್ವ ಜೆಡಿಎಸ್ ಸದಸ್ಯೆ ಮಂಜುಳಾ ನಾರಾಯಣಸ್ವಾಮಿ ಅವರು‌ ಕೊನೆಗೂ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷ ಸೇರಿದರು.
ಬಿಜೆಪಿ ರಾಜ್ಯಾಧ್ಯಕ್ಷ ಮಂಜುಳಾ ‌ನಾರಾಯಣಸ್ವಾಮಿ ಅವರು ಪತಿ ಹಾಗೂ ಬಿಜೆಪಿ ಮುಖಂಡರಾದ ನಾರಾಯಣಸ್ವಾಮಿ ಅವರ ಜೊತೆ ಆಗಮಿಸಿದಾಗ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ವೇದಿಕೆಗೆ ಆಹ್ವಾನಿಸಿ ಬಿಜೆಪಿಯ ಕಮಲದ ಬಾವುಟ ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರಿಸಿಕೊಂಡರು.
ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್.ಅಶೋಕ್,
ಬೆಂಗಳೂರು ಕೇಂದ್ರ ಕ್ಷೇತ್ರದ ಸಂಸದ ಕೆ.ಸಿ.ಮೋಹನ್,
ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ,ಸಚಿವರಾದ ಎಸ್.ಟಿ.ಸೋಮಶೇಖರ್,ಬಿಜೆಪಿ ರಾಜ್ಯ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹಾಗೂ ಆರ್.ಆರ್.ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಉಪಸ್ಥಿತರಿದ್ದರು.

Add Comment