ರಾಜ್ಯದಲ್ಲಿ ಬುಧವಾರ 9,289 ಕೊರೊನಾ ಸೋಂಕಿತರು ಗುಣಮುಖ

ರಾಜ್ಯದಲ್ಲಿ ಬುಧವಾರ ಹೊಸದಾಗಿ 5,287 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲೇ 2,717 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ 7,82,773 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಅಲ್ಲದೆ ರಾಜ್ಯದಲ್ಲಿ ಬುಧವಾರ ಒಟ್ಟು 88 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 26 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಒಟ್ಟಾರೆ ರಾಜ್ಯದಲ್ಲಿ ಈವರೆಗೆ 10,696 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಆದರೆ ರಾಜ್ಯದಲ್ಲಿ ಬುಧವಾರ 9,289 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟಾರೆ ಈವರೆಗೆ ರಾಜ್ಯದಲ್ಲಿ 6,71,618 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಆದರೆ ರಾಜ್ಯದಲ್ಲಿ ಇನ್ನೂ 1,04,440 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಐಸಿಯುನಲ್ಲಿ 947 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment