ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ-ಸಿದ್ದರಾಮಯ್ಯ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ, ನಾಗರಿಕ ಜಗತ್ತಿನಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು. ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸ ಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸ ಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ಧಿ ಬರಬಹುದೇನೋ ಎಂದು ವ್ಯಂಗ್ಯವಾಡಿದ್ದಾರೆ.

Add Comment