ಚುನಾವಣೆ ಸಮಯದಲ್ಲಿ ಮುನಿರತ್ನ ಸ್ಪೋಟಕ ಹೇಳಿಕೆ

ಆರ್ ಆರ್ ನಗರ ವಿಧಾನಸಭೆ ಉಪಚುನಾವಣೆಯಲ್ಲಿ ಹೊರಗಿನಿಂದ ಬಂದವರು ಕ್ಷೇತ್ರದಲ್ಲಿ ಕೊಲೆ ಮಾಡುವ ಸಾಧ್ಯತೆ ಇದೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಆರ್.ಆರ್. ನಗರ ಕ್ಷೇತ್ರಕ್ಕೆ ಹೊರಗಿನಿಂದ ಸುಮಾರು 4 ಸಾವಿರ ಜನರು ಬಂದಿದ್ದು, ವೈಯಕ್ತಿಕ ದ್ವೇಷ ಹೆಚ್ಚಳವಾಗುವ ಸಾಧ್ಯತೆ ಇದ್ದು, ಕೊಲೆಗಳಾಗುವ ಸಾಧ್ಯತೆ ಇದೆ. ಇದು ಮುಂದಿನ ದಿನಗಳಲ್ಲಿ ಸ್ಥಳೀಯ ಜನರಿಗೆ ಸಮಸ್ಯೆಯಾಗಲಿದೆ ಎಂದು ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.

Add Comment