ನಿಯಮ ಉಲ್ಲಂಘಿಸಿ ನಟ ಧನ್ವೀರ್ ಬಂಡೀಪುರದಲ್ಲಿ ನೈಟ್ ಸಫಾರಿ

ನಟ ಧನ್ವೀರ್ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಿರುವುದಕ್ಕೆ ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ಹೌದು. ನಟ ಧನ್ವೀರ್ ರಾತ್ರಿ ಸಮಯದಲ್ಲಿ ಬಂಡೀಪುರಕ್ಕೆ ಭೇಟಿ ನೀಡಿದ್ದಲ್ಲದೆ, ಸಫಾರಿ ಕೂಡ ನಡೆಸಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದನ್ನು ನೋಡಿದ ಪ್ರವಾಸಿಗರು ಕೆಂಡಕಾರುತ್ತಿದ್ದಾರೆ. ಸಾಮಾನ್ಯರಿಗೊಂದು ನ್ಯಾಯ, ಸೆಲೆಬ್ರಿಟಿಗಳಿಗೊಂದು ನ್ಯಾಯಾನಾ ಎಂದು ಪ್ರಶ್ನಿಸುತ್ತಿದ್ದಾರೆ. ಸಾಮಾನ್ಯರು ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ರಸ್ತೆಯಲ್ಲಿ ವಾಹನ ನಿಲ್ಲಿಸಿದ್ರೆ ದಂಡ ಹಾಕುತ್ತಾರೆ. ಆದರೆ ಸೆಲೆಬ್ರಿಟಿಗಳಿಗೆ ಮಾತ್ರ ರೆಡ್ ಕಾರ್ಪೆಟ್ ಹಾಕಿ ಸಫಾರಿ ಮಾಡಲು ಅವಕಾಶ ನೀಡಲಾಗಿದೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ.

Add Comment