CET ಪರೀಕ್ಷೆ ದಿನವೇ ಸಿದ್ದು-ಡಿಕೆಶಿ ಪ್ರಮಾಣ ವಚನ: ವಿದ್ಯಾರ್ಥಿಗಳಿಗೆ ಟ್ರಾಫಿಕ್ ಆತಂಕ

0

ಬೆಂಗಳೂರು: ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ (CET Exam) ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಯನ್ನು ನಡೆಸುತ್ತಿದೆ. ಈ ಬಾರಿ ಸಿಇಟಿ ಪರೀಕ್ಷೆ ರಾಜ್ಯದ 592 ಕೇಂದ್ರಗಳಲ್ಲಿ ನಡೆಯಲಿದೆ.

ಬೆಂಗಳೂರಿನಲ್ಲೇ (Bengaluru) 121 ಪರೀಕ್ಷಾ ಕೇಂದ್ರಗಳಿದ್ದು, ಉಳಿದ ಜಿಲ್ಲೆಗಳಲ್ಲಿ 471 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ ಪರೀಕ್ಷೆಗೆ 2,61,610 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

592 ಅಬ್ಸವರ್ಸ್‌ಗಳು, 1,184 ವಿಶೇಷ ಸ್ಕ್ವಾಡ್ ಸಿಬ್ಬಂದಿ, 592 ಕಸ್ಟೋಡಿಯನ್, 10,900 ಇನ್ವಿಜಿಲೇಟರ್‌ಗಳು ಸೇರಿ 23,050 ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಗೊಂಡಿದ್ದಾರೆ. ಮೇ 22ರ ಬೆಳಗ್ಗೆ 11:30ರಿಂದ 12:30ರ ವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಹಾಗೂ ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಇದರಡಿ 2,084 ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರುಪರೀಕ್ಷಾಅಭ್ಯರ್ಥಿಗಳಿಗೆಟ್ರಾಫಿಕ್ಆತಂಕ: ಸಿಇಟಿ ಪರೀಕ್ಷೆ ನಡೆಯಲಿರುವ ಮೊದಲ ದಿನ ಶನಿವಾರದಂದೇ ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಈ ಹಿನ್ನೆಲೆ ರಾಜ್ಯ ಹಾಗೂ ರಾಜಧಾನಿಯ ಮೂಲೆ ಮೂಲೆಗಳಿಂದ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಬರುವ ಸಾಧ್ಯತೆ ಇರುವುದರಿಂದ ನಗರದಲ್ಲಿ ಟ್ರಾಫಿಕ್ ಆಗುವ ಸಾಧ್ಯತೆಯಿದೆ. ಇದೀಗ ಸಿಇಟಿ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿರುವ ಬೆಂಗಳೂರಿನ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಟ್ರಾಫಿಕ್ ಜಾಮ್‌ನ ಭೀತಿ ಎದುರಾಗಿದೆ.

About Author

Leave a Reply

Your email address will not be published. Required fields are marked *

You may have missed