ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ದ್ವಿಪಕ್ಷೀಯ ಬಾಂಧವ್ಯವನ್ನು ಬಯಸುತ್ತದೆ: ಪ್ರಧಾನಿ ಮೋದಿ

0

ಟೋಕಿಯೊ: ಭಾರತವು ಪಾಕಿಸ್ತಾನದೊಂದಿಗೆ (Pakistan) ಸಾಮಾನ್ಯ ಮತ್ತು ನೆರೆಹೊರೆಯ ಸಂಬಂಧವನ್ನು ಬಯಸುತ್ತದೆ ಆದರೆ ಭಯೋತ್ಪಾದನೆಯಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಇಸ್ಲಾಮಾಬಾದ್‌ನ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ( Narendra Modi ) ನಿಕ್ಕಿ ಏಷ್ಯಾಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ದ್ವಿಪಕ್ಷೀಯ ಬಾಂಧವ್ಯವನ್ನು ಬಯಸುತ್ತದೆ ಎಂದು ಹೇಳಿದ ಪ್ರಧಾನಿ ಮೋದಿ, ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಅವರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ ಎಂದಿದ್ದಾರೆ.

ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲದ ಬಗ್ಗೆ ಭಾರತವು ತನ್ನ ಕಳವಳವನ್ನು ಪದೇ ಪದೇ ವ್ಯಕ್ತಪಡಿಸುತ್ತಿದೆ . ಅದೇ ವೇಳೆ ಭಯೋತ್ಪಾದನೆ ಮತ್ತು ಮಾತುಕತೆಗಳು ಒಟ್ಟಿಗೆ ಹೋಗಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಈ ತಿಂಗಳ ಆರಂಭದಲ್ಲಿ ಗೋವಾದಲ್ಲಿ ನಡೆದ ಎಸ್‌ಸಿಒ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿ ಸಿದ್ದರು. ಆದರೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆದಿಲ್ಲ. ಜಪಾನ್‌ನಲ್ಲಿ G7 ಶೃಂಗಸಭೆಗೆ ಹೊರಡುವ ಮುನ್ನ ನಿಕ್ಕಿ ಏಷ್ಯಾಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಈ ಮಾತುಗಳನ್ನು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

You may have missed