ಬಿಹಾರದ 71 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಅಂತ್ಯ

ಬಿಹಾರ ವಿಧಾನಸಭೆಯ 243 ಕ್ಷೇತ್ರಗಳ ಪೈಕಿ ಅಕ್ಟೋಬರ್ 71 ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಸೋಮವಾರ ಅಕ್ಟೋಬರ್ 26 ರಂದು 71 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಅಂತ್ಯಗೊಂಡಿದೆ.
ನವೆಂಬರ್ 3 ರಂದು ಬಿಹಾರದ 94 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ನವೆಂಬರ್ 1 ರಂದು ಚುನಾವಣಾ ಪ್ರಚಾರ ಕಾರ್ಯ ಅಂತ್ಯಗೊಳ್ಳಲಿದೆ.
ನವೆಂಬರ್ 5 ರಂದು 78 ವಿಧಾನಸಭಾ ಕ್ಷೇತ್ರಗಳ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ನವೆಂಬರ್ 3 ರಂದು ಚುನಾವಣಾ ಪ್ರಚಾರ ಕಾರ್ಯ ಅಂತ್ಯಗೊಳ್ಳಲಿದೆ.
ನವೆಂಬರ್ 10 ರಂದು ಬಿಹಾರದ ಒಟ್ಟು 243 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ಕೆ ಟಿವಿ ನ್ಯೂಸ್ ಪಟ್ನಾ

Add Comment