ಸನ್ಮಾನ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯ ಸ್ವೀಕರಿಸದಿರಲು CM ಸಿದ್ದರಾಮಯ್ಯ ನಿರ್ಧಾರ

0

ಬೆಂಗಳೂರು: ಇನ್ನುಮುಂದೆ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ.

 

ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ (Public Programme) ಅನ್ವಯವಾಗಲಿದೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

 

 

ಕಳೆದ ವರ್ಷ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ರಾಜ್ಯ ಸರ್ಕಾರವೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿ ನೀಡದೆ ಕನ್ನಡ ಪುಸ್ತಕಗಳನ್ನು ನೀಡುವಂತೆ ಹೇಳಿತ್ತು.

About Author

Leave a Reply

Your email address will not be published. Required fields are marked *

You may have missed