ರಾಜ್ಯದಲ್ಲಿ ಸೋಮವಾರ ಇಳಿಕೆಯಾದ ಕೊರೊನಾ ಸೋಂಕು

ಕರ್ನಾಟಕದಲ್ಲಿ ಸೋಮವಾರ ಕಡಿಮೆ ಅಂದರೆ 3,130 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 1,603 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಈವರೆಗೆ 8,05,947 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಸೋಮವಾರ ರಾಜ್ಯದಲ್ಲಿ ಕಡಿಮೆ ಅಂದರೆ 42 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 20 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಈವರೆಗೆ 10,947 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಆದರೆ ರಾಜ್ಯದಲ್ಲಿ ಸೋಮವಾರ ಬರೋಬ್ಬರಿ 8,715 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಈವರೆಗೆ 7,19,558 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಆದರೆ ರಾಜ್ಯದಲ್ಲಿ ಇನ್ನೂ 75,423 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 49,224 ಕೊರೊನಾ ಸೋಂಕಿತರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ 942 ಜನರು ಕೊರೊನಾ ಸೋಂಕಿನಿಂದ ಐಸಿಯುನಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment