ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲು

ಆರ್ ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ದೂರು ದಾಖಲಾಗಿದೆ. ಆರ್ ಆರ್ ನಗರ ಉಪಚುನಾವಣೆಯ ಕಾವು ದಿನೇದಿನೇ ಹೆಚ್ಚುತ್ತಿದ್ದು, ಒಂದಲ್ಲಾ ಒಂದು ಸದ್ದು ಗದ್ದಲಗಳು ನಡೆಯುತ್ತಿವೆ. ಈ ಹಿನ್ನೆಲೆ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ದೂರು ದಾಖಲಾಗಿತ್ತು. ಆದ್ರೆ ಈಗ ಬಿಜೆಪಿ ಅಭ್ಯರ್ಥಿ ಮುನಿರತ್ನ ಹಾಗೂ ಕಾಂಗ್ರೆಸ್ ಎಂಎಲ್‌ಸಿ ನಾರಾಯಣಸ್ವಾಮಿ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಹೌದು. ಬಿಜೆಪಿ ಅಭ್ಯರ್ಥಿ ಮುನಿರತ್ನ ಮತದಾರರಿಗೆ ಒಂದು ವೋಟಿಗೆ ೫ ಸಾವಿರದ ಆಮಿಷ ಒಡ್ಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Add Comment