ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು, ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್ ಅವರು, ಅಸ್ಟ್ರಾಜನಿಕಾ ಸಂಸ್ಥೆ ಎಂಡಿ ಗಗನ್ ದೀಪ್ ಸೇರಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಆಕ್ಸ್ಫರ್ಡ್ ವಿವಿ ಲಸಿಕೆ ಪ್ರಯೋಗ ಮೊದಲ ಹಂತ ಮುಕ್ತಾಯವಾಗಿದ್ದು, 2021 ಆರಂಭದಲ್ಲೇ ರಾಜ್ಯದ ಜನತೆಗೆ ಕೋವಿಡ್ ಲಸಿಕೆ ಸಿಗಲಿದೆ ಎಂದರು.