ರಾಜ್ಯದಲ್ಲಿ ಮಂಗಳವಾರವೂ ಕೊರೊನಾ ಅಬ್ಬರ ಇಳಿಕೆ

ರಾಜ್ಯದಲ್ಲಿ ಮಂಗಳವಾರ 3,691 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 1,874 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ‌. ಒಟ್ಟಾರೆ ರಾಜ್ಯದಲ್ಲಿ ಈವರೆಗೆ 8,09,638 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಮಂಗಳವಾರ 44 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 24 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಡಾರೆ ರಾಜ್ಯದಲ್ಲಿ ಈವರೆಗೆ 10,991 ಜನರು ಕೊರೊನಾ ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ‌. 19 ಕೊರೊನಾ ಸೋಂಕಿತರು ಅನ್ಯ ಕಾರಣಗಳಿಂದ ಮೃತಪಟ್ಟಿದ್ದಾರೆ.
ಆದರೆ ಮಂಗಳವಾರ ರಾಜ್ಯದಲ್ಲಿ ಒಟ್ಟು 7,740 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ ರಾಜ್ಯದಲ್ಲಿ 944 ಕೊರೊನಾ ಸೋಂಕಿತರು ಐಸಿಯುನಲ್ಲಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment