ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೋನಾ ಪಾಸಿಟಿವ್

ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಸ್ಮೃತಿ ಇರಾನಿ ತಮ್ಮ ಟ್ವಿಟರ್?ನಲ್ಲಿ ಮಾಹಿತಿ ನೀಡಿದ್ದಾರೆ. ಯಾವುದೇ ಘೋಷಣೆಯನ್ನು ಮಾಡುವಾಗ ನಾನು ಪದಗಳಿಗಾಗಿ ತಡಕಾಡುವುದು ತೀರಾ ವಿರಳ. ಆದರೂ ಇದನ್ನು ಸರಳವಾಗಿ ಹೇಳುತ್ತಿದ್ದೇನೆ.. ನನ್ನ ಕೊರೊನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದವರು ಶೀಘ್ರವೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

Add Comment