6.80 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಖರೀದಿಗೆ ಅನುಮೋದಿಸಲಾಗಿದೆ: ಜಿ ಕಿಶನ್ ರೆಡ್ಡಿ

0

ವದೆಹಲಿ: ಸಾರ ವರ್ಧಿತ ಪ್ಯಾರಾ ಬಾಯಿಲ್ಡ್ ಅಕ್ಕಿ ಖರೀದಿ ವಿಚಾರದಲ್ಲಿ (Fortified Parboiled Rice) ಕೇಂದ್ರ ಸರ್ಕಾರವು ತೆಲಂಗಾಣದ ರೈತರಿಗೆ ನಿರಂತರವಾಗಿ ಬೆಂಬಲ ನೀಡುತ್ತಿದೆ. ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ಖಾರಿಫ್ ಮಾರ್ಕೆಟಿಂಗ್ ಸೀಸನ್ (KMS) 2022-2023 ಅವಧಿಗಾಗಿ ಹೆಚ್ಚುವರಿ 6.80 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ (G Kishan Reddy) ಹೇಳಿದ್ದಾರೆ.

2021-22 ರಾಬಿ ಹಂಗಾಮಿಗೆ ಮತ್ತು 2022-23 ಖಾರಿಫ್ ಹಂಗಾಮಿಗೆ 13.73 ಲಕ್ಷ ಮೆಟ್ರಿಕ್ ಟನ್ ಅಕ್ಕಿಯ ಸಂಗ್ರಹಣೆಗೆ ಅನುಮೋದಿಸಲಾಗಿತ್ತು. ಅದಕ್ಕೆ ಪೂರಕವಾಗಿ ಹೆಚ್ಚುವರಿಯಾಗಿ ಈಗ 6.80 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅನುಮೋದಿಸಲಾಗಿದೆ ಎಂದು ಅವರು ತಿಳಿಸಿದರು.

About Author

Leave a Reply

Your email address will not be published. Required fields are marked *

You may have missed