ಉಪಚುನಾವಣೆ ಹಿನ್ನೆಲೆ-ಆರ್.ಆರ್.ನಗರ ಕ್ಷೇತ್ರದಲ್ಲಿ 4 ದಿನ ನಿಷೇಧಾಜ್ಞೆ

ನವೆಂಬರ್ 3 ರಂದು ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಗಾಗಿ ಮತದಾನ ನಡೆಯಲಿರುವ ಕಾರಣ ನವೆಂಬರ್ 3ರ ಸಂಜೆ 6 ಗಂಟೆಯಿಂದ ನವೆಂಬರ್ 4ರ ಸಂಜೆ 6 ಗಂಟೆಯವರೆಗೆ ಭಾರತೀಯ ದಂಡ ಪ್ರಕ್ರಿಯೆ ಐಪಿಸಿ ಸೆಕ್ಷನ್ 144ರ ಅನ್ವಯ ನಿಷೇದಾಜ್ಞೆ ಹೊರಡಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಉಪಚುನಾವಣೆ ಹಿನ್ನೆಲೆಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶಾಂತಿ ಸುವ್ಯವಸ್ಥೆ ಕಾಪಾಡಲು ಈ ಆದೇಶ ಹೊರಡಿಸಿದ್ದಾರೆ.
ಕೆ ಟಿವಿ ನ್ಯೂಸ್ ಬೆಂಗಳೂರು

Add Comment