ಒಡಿಶಾದಲ್ಲಿ 3 ರೈಲು ಅಪಘಾತ: ಸಿಎಂ ಸಿದ್ದರಾಮಯ್ಯ ಸಂತಾಪ

0

ಬೆಂಗಳೂರು: ಒಡಿಶಾ ರೈಲು ಅಪಘಾತದಲ್ಲಿ 50 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು.

 

ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ತಿಳಿಸಿದ್ದಾರೆ.

ಇನ್ನೂ ಬಾಲಸೋರ್ ಜಿಲ್ಲೆಯಲ್ಲಿ ಪ್ಯಾಸೆಂಜರ್ ರೈಲು ಹಳಿತಪ್ಪಿ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 50 ಕ್ಕೂ ಮಂದಿ ಮೃತಪಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed