ಬಾಡಿಗೆದಾರರಿಗೂ ಗೃಹ ಬಳಕೆ ವಿದ್ಯುತ್​ ಉಚಿತ: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ರಾಜ್ಯಾದ್ಯಂತ ಎಲ್ಲ ಬಾಡಿಗೆದಾರರಿಗೂ ಗೃಹ ಬಳಕೆ ವಿದ್ಯುತ್​ ಉಚಿತ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ ಉಚಿತ ವಿದ್ಯುತ್ ನೀಡ್ತೇವೆ.

200 ಯೂನಿಟ್​ ಒಳಗೆ ವಿದ್ಯುತ್​​ ಉಪಯೋಗಿಸುವ ಎಲ್ಲರಿಗೂ ಉಚಿತವಾಗಿರುತ್ತದೆ. ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್​ ಬಳಸುವವರಿಗೆ ಮಾತ್ರ ಈ ನಿಯಮ ಅನ್ವಯ ಆಗಲ್ಲ ಎಂದು ಪುನರುಚ್ಚರಿಸಿದ್ದಾರೆ. ನೂತನ ಕಾಂಗ್ರೆಸ್​​ ಸರ್ಕಾರ ಚುನಾವಣೆ ಪೂರ್ವ ನೀಡಿದ್ದ ಗ್ಯಾರಂಟಿ ವಾಗ್ದಾನಗಳ ಜಾರಿಗೊಳಿಸಲು ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದು, ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮಧ್ಯೆ ನಿರ್ದಿಷ್ಟವಾಗಿ 200 ಯುನಿಟ್​​ ಉಚಿತ ವಿದ್ಯುತ್ ಎಂಬ ಗ್ಯಾರಂಟಿ ವಾಗ್ದಾನದ ಬಗ್ಗೆ ಅಪಸ್ವರ ಎದ್ದಿದೆ. ಈ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.

About Author

Leave a Reply

Your email address will not be published. Required fields are marked *

You may have missed