ಗೋ ಹತ್ಯೆ ವಿಚಾರ: ಸರ್ಕಾರದ ತೀರ್ಮಾನ ಏನೆಂದು ಕಾದು ನೋಡೋಣ: ಸಂಸದ ಡಿ.ಕೆ. ಸುರೇಶ್

0

ಬೆಂಗಳೂರು: ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಡಿಕೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರ ಏನು ತೀರ್ಮಾನ ಮಾಡುತ್ತದೆ ಎಂದು ಕಾದು ನೋಡೋಣ.

ರೈತರಿಗೆ ಅನುಪಯುಕ್ತವಾದ ಜಾನುವಾರುಗಳನ್ನು ಹಿಂದಿನಿಂದಲೂ ಬೇರೆ ಬೇರೆ ಕೆಲಸಕ್ಕೆ ಬಳಸುತ್ತಿದ್ದಾರೆ. ಈ ಬಗ್ಗೆ ವ್ಯಾಪಕ ಚರ್ಚೆ ಆಗಬೇಕು.

ರೈತರ ದೃಷ್ಟಿಯಿಂದ ಮತ್ತು ಸಂಸ್ಕೃತಿ‌ ದೃಷ್ಟಿಯಿಂದ ಏನು ಮಾಡಬೇಕು ಎಂದು ಚರ್ಚೆ ಮಾಡಬೇಕಾಗುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.

About Author

Leave a Reply

Your email address will not be published. Required fields are marked *

You may have missed