ರೂಪಾ ಮೌದ್ಗಿಲ್‌ಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು

0

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದ ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಜಾಮೀನು ಸಿಕ್ಕಿದೆ.

ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ನನ್ನ ವಿರುದ್ಧ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ.

ವಿದ್ಯುನ್ಮಾನ ಮಾಧ್ಯಮದಲ್ಲೂ ಹೇಳಿಕೆ ನೀಡಿದ್ದಾರೆ.

ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಿದೆ. ಅದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿ, ಮಾನಸಿಕ ಯಾತನೆ ಉಂಟು ಮಾಡಿವೆ ಎಂದು ರೋಹಿಣಿ ಸಿಂಧೂರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ ತನ್ನ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಬೇಕು ಎಂದು ರೂಪಾ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ 24 ನೇ ಎಸಿಎಂಎಂ ಕೋರ್ಟ್ ಹಾಲ್‌ಗೆ ಇಂದು ಐಪಿಎಸ್‌ ಅಧಿಕಾರಿ ರೂಪಾ ಹಾಜರಾದರು. ಕೋರ್ಟ್‌ಗೆ ಹಾಜರಾಗಿ ಜಾಮೀನು ರೂಪಾ ಜಾಮೀನು ಪಡೆದುಕೊಂಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ಜೂನ್ 22 ಕ್ಕೆ ಮುಂದೂಡಲಾಗಿದೆ.

About Author

Leave a Reply

Your email address will not be published. Required fields are marked *

You may have missed