ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಗೆ ಕೊರೋನಾ ಪಾಸಿಟಿವ್

ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೋರೋನಾದ ಯಾವುದೇ ಗುಣಲಕ್ಷಣಗಳು ಕಂಡುಬಂದಿರಲಿಲ್ಲ. ಆದರೂ ಆಸ್ಪತ್ರೆಯಲ್ಲಿ ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ವರದಿ ಬಳಿಕ ಕೊರೋನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 4-5 ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕೂಡಲೇ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

Add Comment