BREAKING NEWS- ಸಿದ್ದುಗೆ ಗುದ್ದು, ವಿವಾದಿತ ಟಿಪ್ಪು ಜಯಂತಿ ರದ್ದು

 

ಕೊನೆಗೂ ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ರದ್ದಾಗಿದೆ. ಯಡಿಯೂರಪ್ಪ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸಿದ್ದರಾಮಯ್ಯ ಅವಧಿಯಲ್ಲಿ ಆಚರಿಸಲಾಗ್ತಿದ್ದ ಟಿಪ್ಪು ಜಯಂತಿಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸ್ತಿತ್ತು. ಇದೀಗ ಅಧಿಕಾರಕ್ಕೆ ಬರುತ್ತಿದ್ದಂತೆಯೇ, ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಇಂದು ಬೆಳಗ್ಗೆ ಶಾಸಕ ಕೆ.ಜಿ.ಬೋಪಯ್ಯ ಸರಕಾರಿ ಟಿಪ್ಪು ಜಯಂತಿ ಆಚರಣೆ ರದ್ದುಪಡಿಸಬೇಕೆಂದು ಮನವಿ ಮಾಡಿದ್ರು. ಈ ಹಿನ್ನೆಲೆಯಲ್ಲಿ ಸಂಪುಟ ಸಭೆ ನಡೆಸಿದ ಸಿಎಂ ಯಡಿಯೂರಪ್ಪ, ಸರ್ಕಾರಿ ಜಯಂತಿ ರದ್ದುಗೊಳಿಸಿ ಆದೇಶ ಹೊರಡಿಸಿದ್ರು. ಈ ಬಾರಿ ಸರ್ಕಾರದ ವತಿಯಿಂದ ಇನ್ನು ಟಿಪ್ಪು ಜಯಂತಿ ಇಲ್ಲ, ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿಗೆ ಕೊನೆಗೂ ಸರ್ಕಾರ ಬ್ರೇಕ್ ಹಾಕಿದೆ.

Add Comment